ಕ್ರೀಡೆಯಿಂದ ದೈಹಿಕ, ಮಾನಸಿಕ ಸದೃಢರಾಗಲು ಸಾಧ್ಯ: ಎಂ.ಎಚ್. ಪಾಟೀಲ

9-RNR-01
Published on

ರಾಣೆಬೆನ್ನೂರ: ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವುರಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಕ್ರೀಡೆ ಯುವಜನರ ಚೇತನವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಹೇಳಿದರು.
ತಾಲೂಕಿನ ಉಕ್ಕುಂದ ಗ್ರಾಮದ ಬಸವೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಕಾಕೋಳ ಮಂಡಳ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿಕೊಂಡು ಅದರಿಂದ ಆಗುವ ದುಷ್ಪರಿಣಾಮದಿಂದ ದೂರವಿರಬೇಕು ಎಂದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಸುರೇಶ ಪಾರ್ವತೇರ, ಮುಖ್ಯಶಿಕ್ಷಕ ಕುಬೇಂದ್ರ ನಾಯಕ, ಎಲ್.ಸಿ. ಹನಗೋಡಿ, ಸೋಮನಗೌಡ ಪಾಟೀಲ, ಗಂಗಪ್ಪ ಬೇವಿನಹಳ್ಳಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net