

Stomach Pain: ಹೊಟ್ಟೆ ಮತ್ತು ಕಿವಿ ನೋವು ತಾಳಲಾರದೆ ಬಿ.ಟೆಕ್(ಇಂಜಿನಿಯರಿಂಗ್) ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ನ ಆದಿಬಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೈದರಾಬಾದ್ನ ಪಟೇಲ್ಗೂಡದ ನಿವಾಸಿ ಮೈತ್ರಿ(20) ಮೃತೆ. ಇಬ್ರಾಹಿಂಪಟ್ಟಣಂನ ಗುರುನಾ ನಕ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್‌ನ ಎರಡನೇ ವರ್ಷದಲ್ಲಿ ಓದುತ್ತಿದ್ದಾಳೆ. ಇತ್ತೀಚಿಗೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಈಕೆ ಬುಧವಾರ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆದಿಬಟ್ಲಾ ಪೊಲೀಸ್ ಠಾಣೆ ಸಿಐ ರಾಘವೇಂದ್ರ ರೆಡ್ಡಿ ತಿಳಿಸಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್)