ಭೂಗತ ಪಾತಕಿ ಛೋಟಾ ರಾಜನ್ ಏಮ್ಸ್​​ ಆಸ್ಪತ್ರೆಗೆ ದಾಖಲು

rajan pic
Published on

ದೆಹಲಿ: ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್, ಅನಾರೋಗ್ಯ ನಿಮಿತ್ತ ಇಂದು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಬೆಳಗ್ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಪ್ರಿಲ್​​ನಲ್ಲಿ ಕರೊನಾ ಪಾಸಿಟಿವ್ ದೃಢಪಟ್ಟ ಕಾರಣ ಇದೇ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದನು.

2015 ರಲ್ಲಿ ಇಂಡೋನೇಷ್ಯಾದ ಬಾಲಿ ಎಂಬಲ್ಲಿ 61 ವರ್ಷದ ರಾಜನ್ ಬಂಧನವಾಗಿತ್ತು. ನಂತರ ಭದ್ರತೆಯೊಂದಿಗೆ ದೆಹಲಿ ತಿಹಾರ್ ಜೈಲಿನಲ್ಲಿ ಇಡಲಾಗಿತ್ತು.
ಈತನ ಮೇಲೆ ಮುಂಬೈನಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 2011 ರ ಪತ್ರಕರ್ತ ಜೋತಿರ್ಮೊ ದೇ ಹತ್ಯೆ ಪ್ರಕರಣದ ಅಪರಾಧಿಯಾಗಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net