

ಮಹಾರಾಷ್ಟ್ರ: ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾದ ಘಟನೆ ಮಹಾರಾಷ್ಟ್ರದ ಥಾಣೆಯ ಮುಂಬ್ರಾ ಪ್ರದೇಶದಲ್ಲಿ ವರದಿಯಾಗಿದೆ.
ಥಾಣೆ ಪೊಲೀಸರ ಪ್ರಕಾರ, ಮೃತದೇಹದ ಬಗ್ಗೆ ಮಾಹಿತಿ ಪಡೆದ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಡೈಘರ್ ಪೊಲೀಸ್ ಠಾಣೆಯ ಅಧಿಕಾರಿಗಳು, ದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಸೋಮವಾರ ಮುಂಜಾನೆ, ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ಚರಂಡಿಯೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಎಡಿಆರ್ ಅಡಿಯಲ್ಲಿ ಪ್ರಕರಣವನ್ನು ಸಹ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ,(ಏಜೆನ್ಸೀಸ್).