ಅಪರಿಚಿತ ವಾಹನ ಡಿಕ್ಕಿ, ದ್ವಿಚಕ್ರ ಸವಾರ ಸಾವು

accident-15
Published on

ಬೆಂಗಳೂರು: ಸ್ನೇಹಿತರನ್ನು ಭೇಟಿಯಾಗಿ ಮನೆಗೆ ವಾಪಾಸ್ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾನೆ.
ಮಹಾಲಕ್ಷ್ಮೀ ಲೇಔಟ್ ನಿವಾಸಿ ಕಿರಣ್(೨೨) ಮೃತಪಟ್ಟವನು. ಭಾನುವಾ ರಾತ್ರಿ ಸುಮಾರು ೮.೩೦ಕ್ಕೆ ಮತ್ತಿಕೆರೆ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.
ಹೊಸಕೆರೆಹಳ್ಳಿಯ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ. ಭಾನುವಾರ ರಾತ್ರಿ ಮತ್ತಿಕೆರೆಯಲ್ಲಿ ಸ್ನೇಹಿತರನ್ನು ಮಾತನಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಾಸ್ ಹೋಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಕಿರಣ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಕೂಡಲೇ ಗಾಯಾಳು ಕಿರಣ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಕಿರಣ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮಾಡಿಸಿ ವಾರಸುದಾರರಿಗೆ ಕಿರಣ್ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಅಪಘಾತದ ಬಳಿಕ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ವಾಹನ ಹಾಗೂ ಅದರ ಚಾಲಕನನ್ನು ಪತ್ತೆಹಚ್ಚಲಾಗುವುದು. ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.\

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net