

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್ನಲ್ಲಿ ಲೋಕಪಾಲ ಸಂಸ್ಥೆಗೆ 74 ಕೋಟಿ ರೂಪಾಯಿ ಹಂಚಿಕೆ ಮಾಡಿದೆ. ಆದರೆ ಕೇಂದ್ರ ವಿಚಕ್ಷಣಾ ಆಯೋಗ (ಸಿವಿಸಿ)ಕ್ಕೆ ಕೇವಲ ಅಲ್ಪ ಪ್ರಮಾಣ ಹಣ ನೀಡಿದೆ.
ಮುಂದಿನ ಹಣಕಾಸು ವರ್ಷಕ್ಕೆ ಲೋಕಪಾಲ್ ಸಂಸ್ಥೆಗೆ ಒಟ್ಟು 74.7 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು.
ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಹಣದಲ್ಲಿ ಲೋಕಪಾಲ್ ಕಚೇರಿ ನಿರ್ಮಾಣಕ್ಕೆ ಬಳಸಿಕೊಳ್ಳಬಹುದು ಎಂದು ಸಚಿವರು ಹೇಳಿದರು.
ಲೋಕಾಪಾಲರ ಕಚೇರಿ ಈಗ ಖಾಸಗಿ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿದೆ. ಕೇಂದ್ರ ವಿಚಕ್ಷಣಾ ಆಯೋಗಕ್ಕೆ (ಸಿವಿಸಿ) ಈ ಬಾರಿ ಬಜೆಟ್ನಲ್ಲಿ 39 ಕೋಟಿ ರೂಪಾಯಿ ನಿಗದಿ ಮಾಡಿದೆ. ಈ ಹಣದಲ್ಲಿ ಈ ವರ್ಷ ಸಿವಿಸಿ 36.65 ಕೋಟಿ ರೂಪಾಯಿ ಖರ್ಚು ಮಾಡಬಹುದಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. (ಏಜೆನ್ಸೀಸ್)