

ನವದೆಹಲಿ: ಬಹುನಿರೀಕ್ಷಿ 2023-24ನೇ ಸಾಲಿನ ಬಜೆಟ್ ಮಂಡನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ.1) ಬೆಳಗ್ಗೆ 11 ಗಂಟೆಗೆ ಆರಂಭಿಸಿದ್ದಾರೆ. ಸದ್ಯ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ನಡುವೆ ಮಂಡನೆ ಆಗುತ್ತಿರುವ ಈ ಬಜೆಟ್ ವಿಶ್ವದ ಗಮನ ಸೆಳೆದಿದೆ. ಹೀಗಾಗಿ ಜನರು ಕೂಡ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, 1000 ರೂ. ದಾಟಿರುವ ಸಿಲಿಂಡರ್ ಬೆಲೆ ಇಳಿಕೆ ಆಗಲಿದೆಯಾ? ಶತಕ ಬಾರಿಸಿರುವ ಪೆಟ್ರೋಲ್ ದರದಲ್ಲಿ ಕೊಂಚ ನಿರಾಳ ಕಾಣಬಹುದಾ? ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಕಡಿಮೆ ಆಗಲಿದೆಯಾ? ಬೀಜ ಗೊಬ್ಬರ ಖರೀದಿಯಲ್ಲಿ ಸಬ್ಸಿಡಿ ಸಿಗುತ್ತಾ? ಈ ಬಾರಿ ಆದಾಯ ತೆರಿಗೆ ಮಿತಿಯನ್ನು ಸರ್ಕಾರ ಹೆಚ್ಚಿಸುತ್ತಾ? ಯಾವುದು ಇಳಿಕೆ ಯಾವುದು ಏರಿಕೆ? ಜನರಿಗೆ ಪ್ರಧಾನಿ ಮೋದಿ ಕೊಡ್ತಾರಾ ಗುಡ್ ನ್ಯೂಸ್? ಎಂಬಿತ್ಯಾದಿ ಪ್ರಶ್ನೆಗಳಿಗೆ ಇಂದಿನ ಬಜೆಟ್ನಲ್ಲಿ ಉತ್ತರ ಸಿಗಲಿದೆ. ತಜ್ಞರ ಚರ್ಚೆಯನ್ನು ಒಳಗೊಂಡಂತೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಈ ಮೇಲಿನ ದಿಗ್ವಿಜಯ 24X7 ನ್ಯೂಸ್ ಯೂಟ್ಯೂಬ್ ಲೈವ್ನಲ್ಲಿ ಅಥವಾ ಕೆಳಗಿನ ಫೇಸ್ಬುಕ್ ಪೇಜ್ನಲ್ಲಿ ವೀಕ್ಷಿಸಬಹುದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 10ನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ 5ನೇ ಬಜೆಟ್ ಆಗಿದೆ. ಈ ಬಾರಿಯು ಸೂಟ್ಕೇಸ್ ಸಂಪ್ರದಾಯವಿಲ್ಲ ಮತ್ತು ಮುದ್ರಣದ ಪ್ರತಿಗಳು ಇರುವುದಿಲ್ಲ. ಕಳೆದ ಬಾರಿಯಂತೆ ಇ ಬಜೆಟ್ ಮಂಡನೆಯಾಗಲಿದೆ.