Union Budget 2025; ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ಒತ್ತು:ಉಡಾನ್​ಗೆ ಹೊಸ 100 ನಗರಗಳು ಸೇರ್ಪಡೆ

dk (96)
Published on

Union Budget 2025: ಸಂಸತ್ತಿನಲ್ಲಿ ವಿರೋಧ ಪಕ್ಷದ ಗದ್ದಲದ ನಡುವೆ ಈ ಬಾರಿಯ 2025-26ರ ಕೇಂದ್ರ ಬಜೆಟ್​ ಮಂಡನೆಯನ್ನು ಶನಿವಾರ ಆರಂಭಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​, ಬಡವರು, ಯುವಕರು, ರೈತರು, ಮಹಿಳೆಯರ ಅಭಿವೃದ್ಧಿ ಸೇರಿದಂತೆ ಒಟ್ಟು ಪ್ರಮುಖ 10 ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಇದೀಗ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ವಿವಿಧ ಯೋಜನೆಗಳು ಮಂಡನೆ ಇಲ್ಲಿದೆ...

ರಾಜ್ಯ ಸರ್ಕಾರ ಸಹಯೋಗದೊಂದಿಗೆ ವಿವಿಧ 50 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುವುದು. ಇನ್ನು ಬಹುಕಾಲದಿಂದ ಬಾಕಿ ಉಳಿದಿದ್ದ ಹೊಟೇಲ್​ ನಿರ್ಮಾಣ ಸೇರಿದಂತೆ ಇತರ ಮೂಲ ಸೌಕರ್ಯಕ್ಕೆ ಒತ್ತು ನೀಡಿದ್ದಾರೆ. ಉಡಾನ್ ಯೋಜನೆಗೆ 100 ಹೊಸ ನಗರಗಳು ಸೇರ್ಪಡೆಗೊಳ್ಳಲಿವೆ. ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದ್ದು. ವೀಸಾ ನಿಯಮಗಳನ್ನು ಸಡಿಲಗೊಳಿಸಲಾಗುವುದು ಎಂದರು.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net