

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್ (Budget) ಮಂಡಿಸುತ್ತಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ.
ಅದರಂತೆ ಬಜೆಟ್ನಲ್ಲಿ (Budget) ಬಿಹಾರಕ್ಕೆ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ, ಪಟ್ನಾ ಐಐಟಿ ವಿಸ್ತರಣೆಗೆ ಅನುದಾನ, ಮಖಾನಾ ಮಂಡಳಿ ಸೇರಿದಂತೆ ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರದ ಈ ನಡೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸಂಸದರು ಗದ್ದಲವನ್ನು ಎಬ್ಬಿಸಿದ್ದಾರೆ.
ಇದಲ್ಲದೆ ಕಿಸಾನ್ ಕ್ರೆಡಿಟ್ ಕಾರ್ಡ್ನಲ್ಲಿ ಸಾಲದ ಮಿತಿಯನ್ನು 3ರಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು, ಈ ವಿಚಾರವನ್ನು ವಿತ್ತ ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಮೇಕ್ ಇಂಡಿಯಾ ಉತ್ತೇಜಿಸುವ ಸಲುವಾಗಿ ವಿತ್ತ ಸಚಿವರು ಭರಪೂರ ಯೋಜನೆಗಳನ್ನು ಘೋಷಿಸಲಾಗಿದ್ದು, ಪ್ರತ್ಯೇಕ ಅನುದಾನವನ್ನು ಮೀಸಲಿಡಲಾಗಿದೆ.