

ನವದೆಹಲಿ: ಮಹಾಮಾರಿ ಕರೊನಾದಿಂದ ಕಂಗೆಟ್ಟಿದ್ದ ಆರ್ಥಿಕತೆಯ ಚೇತರಿಕೆಗೆ ಒಳಗೊಂಡ ಅಂಶವನ್ನೇ ಕೇಂದ್ರವಾಗಿಸಿಕೊಂಡ 2021-22ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ದೇಶದ 4 ರಾಜ್ಯಗಳಿಗೆ ಮಾತ್ರ ಬಂಪರ್ ಆಫರ್ ಸಿಕ್ಕಿದೆ.
ಈ ವರ್ಷ ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯನ್ನೇ ಗಮನದಲ್ಲಿಟ್ಟುಕೊಂಡ ಕೇಂದ್ರ ಸರ್ಕಾರ, ಈ ನಾಲ್ಕೂ ರಾಜ್ಯಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಪ್ರಕಟಿಸಿದೆ. ಇದನ್ನೂ ಓದಿರಿ ಕೇಂದ್ರ ಬಜೆಟ್| ಜನ ಸಾಮಾನ್ಯರಿಗೆ ಯಾವುದು ಅಗ್ಗ? ಯಾವುದು ದುಬಾರಿ?
2022ರೊಳಗಾಗಿ 8,500 ಕಿ.ಮೀ ಹೆದ್ದಾರಿ ನಿರ್ಮಾಣ ಯೋಜನೆ ಗುರಿ ಹೊಂದಿರುವುದಾಗಿ ಹೇಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದರು.
ರಸ್ತೆ ಅಭಿವೃದ್ಧಿಯಲ್ಲದೇ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಚಹಾ ವ್ಯಾಪಾರಿಗಳಿಗೆ ಬಜೆಟ್ನಲ್ಲಿ 1,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಎರಡೂ ರಾಜ್ಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ವಿಶೇಷ ಯೋಜನೆ ಜಾರಿ ಮಾಡುವ ಬಗ್ಗೆ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.