ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ಧೋವಲ್​ ಜತೆ ಗೃಹ ಸಚಿವ ಅಮಿತ್​ ಷಾ ಉನ್ನತ ಮಟ್ಟದ ಸಭೆ...!

Amit Shah And Ajit Doval 9 Jan 20
Published on

ನವದೆಹಲಿ: ಗೃಹ ಸಚಿವ ಅಮಿತ್​ ಷಾ ಅವರು ಇಂದು ರಾಷ್ಟ್ರೀಯ ಭದ್ರತಾ ವ್ಯವಸ್ಥೆ ಪರಿಶೀಲನೆಗೆ ಸಂಬಂಧಪಟ್ಟ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ಧೋವಲ್​, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ ಕುಮಾರ್​ ಸೇರಿ ಹಲವು ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಹಲವು ಕಡೆ ಹಿಂಸಾಚಾರಗಳೂ ನಡೆದಿವೆ. ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ತೆರಳಿದ ಪೊಲೀಸರ ಮೇಲೆ ಕೂಡ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಈ ಮಧ್ಯೆ ಅಮಿತ್​ ಷಾ ನೇತೃತ್ವದಲ್ಲಿ ನಡೆದ ಸಭೆ ಮಹತ್ವ ಪಡೆದುಕೊಂಡಿದೆ.

ದೇಶದ ಭದ್ರತಾ ವ್ಯವಸ್ಥೆ ಬಗ್ಗೆ ಈ ಸಭೆಯಲ್ಲಿ ಗೃಹ ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net