ಅಮಿತ್​ ಷಾ ಬಳಿಕ ಇನ್ನೋರ್ವ ಕೇಂದ್ರ ಸಚಿವರಲ್ಲಿ ಕರೊನಾ ಸೋಂಕು; ಆಸ್ಪತ್ರೆಗೆ ದಾಖಲು

Dharmendra Pradhan
Published on

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಕರೊನಾ ಸೋಂಕಿಗೆ ಒಳಗಾಗಿ ಗುರ್​ಗಾಂವ್ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ, ಇನ್ನೋರ್ವ ಕೇಂದ್ರ ಸಚಿವರಲ್ಲಿ ಕರೊನಾ ದೃಢಪಟ್ಟಿದೆ.

ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಉಕ್ಕಿನ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್​ ಅವರಲ್ಲಿ ಕರೊನಾ ದೃಢಪಟ್ಟಿದ್ದು, ಅವರೂ ಕೂಡ ಅಮಿತ್​ ಷಾ ಅವರು ಚಿಕಿತ್ಸೆ ಪಡೆಯುತ್ತಿರುವ ಮೇದಾಂತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರು ಜು.29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅಮಿತ್​ ಷಾ ಅವರ ಪ್ರಾಥಮಿಕ ಸಂಪರ್ಕವೂ ಇರಲಿಲ್ಲ. ಬದಲಿಗೆ ಅವರ ಕಚೇರಿ ಸಿಬ್ಬಂದಿಯಲ್ಲಿ ಕರೊನಾ ಕಾಣಿಸಿಕೊಂಡಿತ್ತು. ಹಾಗಾಗಿ ಧರ್ಮೇಂದ್ರ ಪ್ರಧಾನ್​ ಅವರು ಸೆಲ್ಫ್​ ಐಸೋಲೇಟ್​ ಆಗಿದ್ದರು. ಇದನ್ನೂ ಓದಿ: 24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು

ದೇಶದಲ್ಲಿ ಹಲವು ಪ್ರಮುಖ ರಾಜಕೀಯ ಮುಖಂಡರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಮಧ್ಯಪ್ರದೇಶ, ಕರ್ನಾಟಕ ಮುಖ್ಯಮಂತ್ರಿಗಳು, ತಮಿಳುನಾಡು ರಾಜ್ಯಪಾಲರು ಕರೊನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net