Bangalore | ಮಾಜಿ ಪ್ರಧಾನಿ ದೇವೆಗೌಡರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ

Untitled design (57)
Published on

ಬೆಂಗಳೂರು: ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ವಿಷಯವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಇಬ್ಬರು ನಾಯಕರು, ದೇವೆಗೌಡರ ಆರೋಗ್ಯ ವಿಚಾರಿಸಿದ್ದು, ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಅತ್ಯಂತ ಲವಲವಿಕೆಯಿಂದ ಮಾತನಾಡಿದರು, ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸಿದರು.

ಆಸ್ಪತ್ರೆಗೆ ಬಿಎಸ್​​ವೈ, ಬಿವಿವೈ ಭೇಟಿ...

ನಿನ್ನೆ (ಶನಿವಾರ, ಅ 11) ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಮತ್ತು ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯದ ಹಿರಿಯ ನಾಯಕನ ಆರೋಗ್ಯ ವಿಚಾರಿಸಿದ್ದರು.

ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ​ ವಿಷಯ ಹಂಚಿಕೊಂಡಿರುವ ಮಾಜಿ ಬಿಎಸ್​ವೈ, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ನಮ್ಮ ದೇಶದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು. ದೇಶ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net