ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್​ಗೆ ಕರೊನಾ ಪಾಸಿಟೀವ್

javadekar
Published on

ನವದೆಹಲಿ : ಭಾರತದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವರಾಗಿರುವ ಪ್ರಕಾಶ್ ಜಾವಡೇಕರ್ ಅವರಿಗೆ ಕರೊನಾ ಪಾಸಿಟೀವ್ ಬಂದಿದೆ.

ಈ ಬಗ್ಗೆ ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವರು, "ಕಳೆದ 2-3 ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಜನರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ಸಂಸದರಾದ ಜಾವಡೇಕರ್ ಅವರು, ಕಳೆದ ತಿಂಗಳು ಪುಣೆಯ ದೀನಾನಾಥ್ ಮಂಗೇಷ್ಕರ್ ಆಸ್ಪತ್ರೆಯಲ್ಲಿ ಕರೊನಾ ಲಸಿಕೆಯ ಮೊದಲನೇ ಡೋಸ್​ ಪಡೆದಿದ್ದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net