

ನವದೆಹಲಿ: ದೇಶದಲ್ಲಿ ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಹಿಂದೆಂದೂ ಕಾಣದ ರೀತಿಯಲ್ಲಿ ರಾಜಕೀಯ ಬಿಸಿ ಏರಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು 14 ಸದಸ್ಯರ ಸಮನ್ವಯ ಮತ್ತು 19 ಸದಸ್ಯರ ಚುನಾವಣಾ ಕಾರ್ಯತಂತ್ರ ಸಮಿತಿಯನ್ನು ಪ್ರಕಟಿಸಿದೆ ಈ ಕುರಿತಾಗಿ ವಿರೋಧವು ವ್ಯಕ್ತವಾಗುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇಂಡಿಯಾ ಮೈತ್ರಿಕೂಟದ ವಿರುದ್ಧವಾಗಿ ಕಿಡಿಕಾರಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಇದನ್ನು ಇಂಡಿಯಾ ಮೈತ್ರಿ ಎಂದು ಕರೆಯುತ್ತಾರೆ, ಆದರೆ ಇದು ಇಂಡಿ ಮೈತ್ರಿ... ನೀವು ಎರಡು ಬಾರಿ ಮೈತ್ರಿ ಎಂದು ಹೇಳಲು ಸಾಧ್ಯವಿಲ್ಲ. ಇದು ಇಂಡಿಯಾ ಮೈತ್ರಿ ಅಲ್ಲ, ಇದು 'ಘಮಾಂಡಿ' ಮೈತ್ರಿ.." ಎಂದು ವಾಗ್ದಾಳಿ ಮಾಡಿದ್ದಾರೆ.
ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿದ್ದು , "ಸಮಾನ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗದಂತೆ " ಎಂದು ಹೇಳಿದ್ದಾರೆ.
ಸನಾತನ ಧರ್ಮದ ಕುರಿತಾಗಿ ಕಾಮೆಂಟ್ ಮಾಡಿದ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತನಾಡಿ, '' ಸನಾತನ ಧರ್ಮ ಒಂದು ಕಾಯಿಲೆ ಇದ್ದಂತೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಾನು ಕಾಂಗ್ರೆಸ್ ಮತ್ತು ಅಶೋಕ್ ಗೆಹ್ಲೋಟ್ ಅವರನ್ನು ಕೇಳಲು ಬಯಸುತ್ತೇನೆ, ಈ ಬಗ್ಗೆ ನೀವು ಏನು ಹೇಳುತ್ತೀರಿ? " ಎಂದು ಪ್ರಶ್ನೆ ಮಾಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟೂ ಒಟ್ಟಾಗಿ ಹೋರಾಡಲು ವಿರೋಧ ಪಕ್ಷದ ಮೈತ್ರಿಕೂಟ 'ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್' INDIA ಮೈತ್ರಿಕೂಟ ಎಂದು ಎರಡು ಡಜನ್ಗಿಂತಲೂ ಹೆಚ್ಚು ಪಕ್ಷಗಳನ್ನು ಒಳಗೊಂಡಿರುವ ವಿರೋಧ ಪಕ್ಷದ ಮೈತ್ರಿಯು ಕೂಟವನ್ನು ಆರಂಭಿಸಿದ್ದಾರೆ.
ಜುಡೇಗಾ ಭಾರತ್, ಜೀತೇಗ ಭಾರತ, (ಭಾರತ ಒಗ್ಗೂಡುತ್ತದೆ, ಭಾರತ ಗೆಲ್ಲುತ್ತದೆ) ಚುನಾವಣೆಯ ತನ್ನ ಥೀಮ್ ಎಂದು ಮೈತ್ರಿಕೂಟ ಹೇಳಿದೆ. ನಾವು ಭಾರತದ ಪಕ್ಷಗಳು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿ ಈ ಮೈತ್ರಿಕೂಟ ಪ್ರಾರಂಭವಾಗಿದೆ.