

ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಕಣ ರಂಗೇರಿದೆ. ಎಲ್ಲ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಬಿಜೆಪಿ ಪರ ಪ್ರಚಾರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಕ್ಕೆ ಬಂದಿದ್ದು, ರಾಜ್ಯದ ಪ್ರಸಿದ್ಧ ದಾಂಡಿಯಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.
ಕೊಯಮತ್ತೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವನತಿ ಶ್ರೀನಿವಾಸನ್ ಪರ ಪ್ರಚಾರದಲ್ಲಿ ಶನಿವಾರದಂದು ಸ್ಮೃತಿ ಇರಾನಿ ಅವರು ಭಾಗವಹಿಸಿದ್ದರು. ಈ ವೇಳೆ ಪಕ್ಷದ ಒಂದಿಷ್ಟು ಕಾರ್ಯಕರ್ತರು ದಾಂಡಿಯಾ ನೃತ್ಯ ಮಾಡಲು ಆರಂಭಿಸಿದ್ದಾರೆ. ಅವರೊಂದಿಗೆ ಹೆಜ್ಜೆ ಹಾಕಿದ ಸಚಿವೆ ದಾಂಡಿಯಾ ನೃತ್ಯ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದ 234 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಕಾಂಗ್ರೆಸ್-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿ ಪರಸ್ಪರರ ವಿರುದ್ಧ ಸ್ಪರ್ಧಿಸುವ ಪ್ರಮುಖ ಗುಂಪುಗಳಾಗಿವೆ. (ಏಜೆನ್ಸೀಸ್)