

ಬೆಂಗಳೂರು: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಇಂದು ಟ್ವೀಟ್ ಮಾಡಿರುವ ಸುರೇಶ್ ಅಂಗಡಿಯವರು, ನಾನು ಕೊವಿಡ್-19 ತಪಾಸಣೆಗೆ ಒಳಗಾಗಿದ್ದೇನೆ. ನನಗೆ ರೋಗದ ಯಾವುದೇ ಲಕ್ಷಣಗಳೂ ಇಲ್ಲ. ಆದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲ, ಇತ್ತೀಚೆಗೆ ನನ್ನ ಸಂಪರ್ಕದಲ್ಲಿರುವವರು ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಮಂತ್ರಿ ಕಚೇರಿಯನ್ನೂ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಬಿಕ್ಕಟ್ಟು ಶಮನಕ್ಕೆ ಭಾರತ-ಚೀನಾ ಮಾತುಕತೆ: ಐದು ಅಂಶಗಳ ಒಪ್ಪಂದ
ಇತ್ತೀಚೆಗೆ ಹಲವು ರಾಜಕಾರಣಿಗಳು ಕೊವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಹೆಚ್ಚಿನವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಇನ್ನೂ ಕೆಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.