ಹಸಿವು ಮುಕ್ತ ಭಾರತಕ್ಕೆ ಸಂಯುಕ್ತ ಜನತಾದಳ ಪ್ರತಿಭಟನೆ

jdu shashikumar gouda protest
ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಮತ್ತು ವೆಂಕಟೇಶ್ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಹಸಿವು ಮುಕ್ತ ಭಾರತವನ್ನಾಗಿಸುವ ನಿಟ್ಟಿನಲ್ಲಿ ರಾಷ್ಟ್ರಪತಿಗಳು ಕೂಡಲೆ ಮಧ್ಯಪ್ರವೇಶ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರ ಪತಿಗೆ ಮನವಿ ಸಲ್ಲಿಸಲಾಯಿತು.

ದೇಶಾದ್ಯಂತ ಇತ್ತೀಚಿನ ವರದಿಗಳ ಪ್ರಕಾರ ಹಸಿವಿನಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ವಿಶ್ವಸಂಸ್ಥೆಯ ಸಮೀಕ್ಷೆ ಆಧಾರದಲ್ಲಿ ಪ್ರಪಂಚದಲ್ಲಿ ಹಸಿವಿನಿಂದ ಸಾಯುತ್ತಿರುವವರ ಪಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ. ಭಾರತ ವಿಶ್ವಗುರು ಆಗಲು ಹೊರಟಿರುವುದು ಒಳ್ಳೆಯ ವಿಚಾರ. ಆದರೂ, ಆರ್ಥಿಕತೆಯಲ್ಲೂ ಲಕ್ಷಾಂತರ ಕೋಟಿ ಮೀರಿ ರಾಜ್ಯ ಮತ್ತು ಕೇಂದ್ರಗಳು ಬಜೆಟ್ ಮಂಡಿಸುತ್ತಿದ್ದರೂ ಬಡ ನಾಗರೀಕರು ಹಸಿವಿನಿಂದ ಸಾಯುತ್ತಿರುವುದುನಿಂತಿಲ್ಲ. ಇದು ವಿಷಾದದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯಸರ್ಕಾರಗಳು ಹಸಿವುಮುಕ್ತ ಭಾರತ ನಿರ್ಮಾಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳು ಮತ್ತು ಸರ್ಕಾರೇತರ ಖಾಸಗಿ ಸಂಘಸಂಸ್ಥೆಗಳ ಮೂಲಕ ಗಂಜಿ ಕೇಂದ್ರಗಳನ್ನು ತೆರೆದು ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಿಕೊಡ ಬೇಕೆಂದು ಆಗ್ರಹಿಸಿದರು. ವೆಂಕಟೇಶ್ ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net