ಬಸ್​ ಮೇಲೆ ಉರುಳಿದ ಲಾರಿ; 11 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿ ಗಂಭೀರ

Road Accident
Published on

ಲಖನೌ: ಬ್ಯಾಲೆಸ್ಟ್​ ಕಲ್ಲುಗಳು ತುಂಬಿದ್ದ ಲಾರಿ ಬಸ್​ ಮೇಲೆ ಉರುಳಿದ ಪರಿಣಾಮ 11 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಕುಮಾರ್​ ಮೀನಾ, ರಾತ್ರಿ 11 ಗಂಟೆ ಸುಮಾರಿಗೆ ಖುತಾರ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿರುವ ಹೆದ್ದಾರಿಯ ಪಕ್ಕದಲ್ಲಿರು ಡಾಭಾದ ಬಳಿ ಉತ್ತರಾಖಂಡಕ್ಕೆ ಭಕ್ತಾಧಿಗಳುನ್ನು ಹೊತ್ತೊಯ್ಯುತ್ತಿದ್ದ ಬಸ್​ ಮೇಲೆ ಬ್ಯಾಲೆಸ್ಟ್​ ಕಲ್ಲುಗಳು ತುಂಬಿದ್ದ ಲಾರಿ ಉರುಳಿದೆ.

ಘಟನೆ ನಡೆದ ವೇಳೆ ಕೆಲವರು ಬಸ್​ನಲ್ಲಿದ್ದರು ಮತ್ತು ಇನ್ನೂ ಕೆಲವರು ಡಾಭಾದಲ್ಲಿ ಊಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಧಿಕಾರಿಗಳು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಕುಮಾರ್​ ಮೀನಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net