ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

Priyanka Gandhi
Published on

ನವದೆಹಲಿ: ಸದಾ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ಕಿಡಿ ಕಾರುವ, ಯುಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಇದೀಗ ಮತ್ತೊಂದು ಆರೋಪ ಮಾಡಿದ್ದಾರೆ.

ದೇಶದಲ್ಲಿ ದಲಿತರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣದಲ್ಲಿ ಮೂರನೇ ಒಂದು ಭಾಗ ಉತ್ತರ ಪ್ರದೇಶದಲ್ಲಿಯೇ ನಡೆಯುತ್ತದೆ. ಅಷ್ಟಾದರೂ ಯೋಗಿ ಆದಿತ್ಯನಾಥ್​ ಅವರು ಇಲ್ಲಿ ಕ್ರೈಂ ನಡೆಯುವುದೇ ಇಲ್ಲವೆಂದು ಸುಳ್ಳು ಹೇಳುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ: ಸಂಸದೆ ಸುಮಲತಾ ಅಂಬರೀಷ್​​ಗೆ ಕರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​

ಟ್ವೀಟ್​ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣಗಳು ತುಂಬ ಕಡಿಮೆಯಾಗಿವೆ ಎಂದು ಯೋಗಿ ಆದಿತ್ಯನಾಥ್​ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ ವಾಸ್ತವ ಬೇರೆ ಇದೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ವಿರುದ್ಧ ನಡೆಯುವ ಅಪರಾಧದ ಪ್ರಮಾಣ 2016ರಿಂದ 2018ರವರೆಗೆ ಶೇ.21ರಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಪರಾಧಗಳೇ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಅಪರಾಧಗಳನ್ನು ತಡೆಯಲು ಇವರಿಂದ ಸಾಧ್ಯವಾಗಿಲ್ಲ ಎಂದು ಅಂಕಿಸಂಖ್ಯೆಗಳೇ ಹೇಳುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net