ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್​; ರಾಮಮಂದಿರದ ಕುರಿತು ಚರ್ಚೆ

Yogi Modi
Published on

ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ಮಾಡಿದ್ದಾರೆ.

ಸುದ್ದಿ ಮೂಲಗಳ ಪ್ರಕಾರ ರಾಮಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಹಾಗೂ ಉತ್ತರಪ್ರದೇಶದಲ್ಲಿನ ಅಭಿವೃದ್ದಿ ಯೋಜನೆಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ಧಾರೆ ಎಂದು ವರದಿಯಾಗಿದೆ.

ಉಭಯ ನಾಯಕರು ಭೇಟಿಯಾದ ಫೋಟೋವನ್ನು ಪ್ರಧಾನಿ ಕಚೇರಿ ಸಿಬ್ಬಂದಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಭಾಗವಹಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಅವರೊಂದಿಗೆ ಉತ್ತರಪ್ರದೇಶದ ಸರ್ಕಾರದ ಹಿರಿಯ ಅಧಿಕಾರಿಗಳು ಸಹ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net