ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಇನ್ನಿಲ್ಲ

Kalyan Sing
Published on

ನವದೆಹಲಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (89) ನಿಧನರಾಗಿದ್ದಾರೆ. ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆಗಿರುವ ಇವರು ಇಂದು ಲಕ್ನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರ ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್​ ಗ್ರ್ಯಾಜುವೇಟ್​ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸಸ್​( ಎಸ್​ಜಿಪಿಜಿಐ) ಆಸ್ಪತ್ರೆಗೆ ಜುಲೈ 4ರಂದೇ ಇವರನ್ನು ಸೇರಿಸಲಾಗಿತ್ತು.

ಎಸ್​ಜಿಪಿಜಿಐ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅವರ ಆರೋಗ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಸಾಕಷ್ಟು ಚಿಕಿತ್ಸೆ ನೀಡಿ ಗುಣಪಡಿಸಲು ಯತ್ನಿಸಿದ್ದರೂ ಅವರು ಇಂದು ಇಹಲೋಕ ತ್ಯಜಿಸಿದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net