ಮದುವೆ ಊಟದ ತಯಾರಿ ವೇಳೆ ರೊಟ್ಟಿ ಮೇಲೆ ಉಗುಳುತ್ತಿರುವ ವ್ಯಕ್ತಿ! ವಿಡಿಯೋ ವೈರಲ್​... Spitting

untitled-design-5-6909cbc750f18
Published on

ಉತ್ತರ ಪ್ರದೇಶ: ಮದುವೆಯ ಊಟ ಎಂದರೆ ಸಾಕು ವಿವಿಧ ಪದಾರ್ಥಗಳು ಬಾಳೆಎಲೆ ಮೇಲೆ ಇರುವಂತೆ ಭಾಸವಾಗುತ್ತದೆ. ಆದರೆ, ಉತ್ತರ ಪ್ರದೇಶ ಮದುವೆಯೊಂದರಲ್ಲಿ ಅಡುಗೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ರೊಟ್ಟಿ ಮೇಲೆ ಉಗುಳುತ್ತಿರುವಂತಹ (Spitting) ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದೀಗ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ವಿಡಿಯೋದಲ್ಲೇನಿದೆ?

ಅಧಿಕಾರಿಗಳ ಮಾಹಿತಿ ಪ್ರಕಾರ, ವೈರಲ್​ ಆಗಿರುವ ವಿಡಿಯೋದಲ್ಲಿ ಡ್ಯಾನಿಶ್​ ಎಂದು ಗುರುತಿಸಲಾದ ವ್ಯಕ್ತಿಯು ರೊಟ್ಟಿಯನ್ನು ತಯಾರಿಸಿ ಬಿಸಿಮಾಡುವಾಗ ಅದರ ಮೇಲೆ ಉಗುಳುತ್ತಿರುವುದನ್ನು ತೋರಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ವ್ಯಕ್ತವಾಗಿದ್ದು, ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ಈ ವಿಡಿಯೋ ಎಲ್ಲೆಡೆ ವೈರಲ್​ ಆದ ನಂತರ ಡ್ಯಾನಿಶ್ ವಿರುದ್ಧ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿ ಆತನಿಗೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ತೇಜ್‌ವೀರ್ ಸಿಂಗ್ ಸುದ್ಧಿಮೂಲಗಳಿಗೆ ಮಾಹಿತಿ ನೀಡಿದ್ದಾರೆ.

ಅಲ್ಲಿನ ನಿವಾಸಿಗಳು ಹಾಗೂ ಸಾಮಾಜಿಕ ಮಾಧ್ಯಮದ ಬಳಕೆದಾರರು ಈ ಕೃತ್ಯವನ್ನು ಖಂಡಿಸಿದ್ದು, ಇದು ನೈರ್ಮಲ್ಯ ಮಾನದಂಡಗಳ ಉಲ್ಲಂಘನೆ ಮಾತ್ರವಲ್ಲದೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂದರ್ಭದಲ್ಲಿ ತೀವ್ರ ಅಗೌರವ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಈ ಘಟನೆ ಕುರಿತು ಮಾತನಾಡಿದ ಪೊಲೀಸ್​ ಅಧಿಕಾರಿ ಸಾರ್ವಜನಿಕರ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುವ ಅಥವಾ ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡುವಲ್ಲಿ ತೊಡಗಿರುವ ಯಾವುದಾದರೂ ವ್ಯಕ್ತಿಗಳು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net