ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ದುಡುಕಿನ ನಿರ್ಧಾರ ತೆಗೆದುಕೊಂಡ ಪತಿ

suicide attempt
Published on

ಮುಜಾಫರ್​ನಗರ: ಪ್ರೀತಿಯ ಮಡದಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದ ವ್ಯಕ್ತಿಯೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲಿಯಲ್ಲಿ ನಡೆದಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಬಾಬ್ರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಸೊಂಟಾ ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಬಲೆಂದರ್​ ಸಿಂಗ್​ (40) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ದಂಪತಿ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಬೇಸತ್ತು ಮಕ್ಕಳನ್ನು ಕರೆದುಕೊಂಡು ಮಡದಿ ತವರು ಮನೆಗೆ ತೆರಳಿದ್ದಳು.

ಪತ್ನಿ ಹೋದಳಲ್ಲ ಎಂಬ ದುಃಖದಲ್ಲಿ ದೇಶಿ ನಿರ್ಮಿತ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net