ವಾಹನ ಚಾಲನೆ ವೇಳೆ ಮೊಬೈಲ್ ಸ್ಫೋಟ; ಅಪಘಾತದಿಂದ ಮಹಿಳೆ ಸಾವು

UP Women
Published on

ಕಾನ್ಪುರ: ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಸ್ಫೋಟಗೊಂಡ ಪರಿಣಾಮ ರಸ್ತೆ ಅಪಘಾತವಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಮೃತರನ್ನು ಪೂಜಾ (28) ಎಂದು ಗುರುತಿಸಲಾಗಿದ್ದು, ಇವರು ಉತ್ತರಪ್ರದೇಶದ ಫರೂಕಾಬಾದ್ ಜಿಲ್ಲೆಯ ನೆಹರಾರಿಯಾ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪೂಜಾ ಅವರು ಕೆಲಸದ ನಿಮಿತ್ತ ಮುಂಬೈಗೆ ತೆರಳಬೇಕಿದ್ದ ಕಾರಣ ಅವರು ವೇಗವಾಗಿ ಗಾಡಿಯನ್ನು ಚಲಾಯಿಸಿಕೊಂಡು ರೈಲ್ವೆ ಸ್ಟೇಷನ್​ನತ್ತ ತರಳುತ್ತಿದ್ದರು. ವಾಹನ ಚಲಾಯಿಸುವಾಗ ಅವರು ಹೆಲ್ಮೆಟ್​ ಧರಿಸಿರಲಿಲ್ಲ ಎಂದು ತಿಳಿದು ಬಂದಿದೆ. ಈ ವೇಳೆ ಮೊಬೈಲ್​ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಸ್ಕೂಟರ್ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಜಾಗರೂಕ ಚಾಲನೆಯಿಂದಾಗಿ ದುರ್ಘಟನೆ ಸಂಭವಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net