

UPI Services Down: ದೇಶಾದ್ಯಂತ ಹಲವು ನಗರಗಳಲ್ಲಿಂದು ಯುಪಿಐ (UPI) ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.
ಶನಿವಾರ (ಇಂದು) ಮಧ್ಯಾಹ್ನ 12 ಗಂಟೆ ಸುಮಾರಿಗೆ ಏಕಕಾಲಕ್ಕೆ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ಸಮಸ್ಯೆಯಾಗಿದೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ಗ್ರಾಹಕರು 5 ನಿಮಿಷವಾದ್ರೂ ಪೂರ್ಣಗೊಳ್ಳದೇ ಇರುವುದು ಕಂಡುಬಂದಾಗ ಸಮ್ಯಸ್ಯೆಯಾಗಿರುವುದು ಗೊತ್ತಾಗಿದೆ.
ಗೂಗಲ್‌ಪೇ, ಫೋನ್‌ಪೇ , ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್‌ಗಳಲ್ಲಿ ಏಕಕಾಲಕ್ಕೆ ಸಮಸ್ಯೆಯಾಗಿದೆ. ಇದರಿಂದ ಗ್ರಾಹಕರು ಬೇರೆಯವರಿಗೆ ಹಣ ಕಳುಹಿಸಲು ಸಾಧ್ಯವಾಗದೇ ಪರದಾಡಿದ್ದಾರೆ. ಯಾವ ಕಾರಣಕ್ಕೆ ಈ ಸಮಸ್ಯೆ ಎದುರಾಗಿದೆ ಎನ್ನುವುದು ತಿಳಿದು ಬಂದಿಲ್ಲ.
ಸರ್ವರ್ ಓವರ್‌ಲೋಡ್‌ಗಳು, ನಿಗದಿತ ನಿರ್ವಹಣೆ ಅಥವಾ ಸಂಭಾವ್ಯ ಸೈಬರ್ ಭದ್ರತಾ ಸಮಸ್ಯೆಗಳು ಇರಬಹುದು ಎನ್ನಲಾಗಿದೆ. ಮಧ್ಯಾಹ್ನದ ವೇಳೆಗೆ ಈ ಯುಪಿಐ ಸಮಸ್ಯೆಗಳ ಬಗ್ಗೆ ಸುಮಾರು 1,168 ದೂರುಗಳು ಬಂದಿವೆ.
ಯುಪಿಐ ಸ್ಥಗಿತದಿಂದ ಎಚ್‌ಡಿಎಫ್‌ಸಿ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್‌ನಂತಹ ಪ್ರಮುಖ ಬ್ಯಾಂಕ್‌ಗಳು ಹಾಗೂ ಹಲವಾರು ಹಣಕಾಸು ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ.