ಫೇಸ್​ಬುಕ್​ಗೆ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್​ ಮಾಡಿ ಸಿಕ್ಕಿಬಿದ್ದ ರೌಡಿಶೀಟರ್!

koli manja
Published on

ಬೆಂಗಳೂರು: ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್​ಬುಕ್​ನಲ್ಲಿ ಅಪ್ಲೋಡ್​ ಮಾಡುತ್ತಿದ್ದ ರೌಡಿಶೀಟರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜಪೇಟೆಯ ಜಿಂಕೆನಗರದ ವಿಠಲನಗರ ನಿವಾಸಿ ಮಂಜುನಾಥ್ ಅಲಿಯಾಸ್ ಕೋಳಿ ಮಂಜ(28) ಬಂಧಿತ.

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್​ಬುಕ್​ನಲ್ಲಿ ಅಪ್ಲೋಡ್​ ಮಾಡಿ ಲೈಂಗಿಕ ಅಪರಾಧ ಎಸಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೈಬರ್​ ಟಿಪ್​ಲೈನ್​ ಮೂಲಕ ಬಂದ ದೂರಿನ ಮೇರೆಗೆ ಆರೋಪಿ ವಿರುದ್ಧ ಬಸವೇಶ್ವರ ನಗರ ಸಿಇಎನ್(ಸೈಬರ್​ ಕ್ರೈಂ) ಪೊಲೀಸ್​ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೋಳಿ ಮಂಜನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕೋಳಿ ಮಂಜನ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ 2014ರಲ್ಲೇ ರೌಡಿ ಶೀಟ್​ ತೆರೆದಿದ್ದು, ಕಳ್ಳತನ ದರೋಡೆ ಸೇರಿ 8 ಪ್ರಕರಣ ದಾಖಲಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net