

ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಆಯೋಜನೆ
ಮಡಿಕೇರಿ : ಲೋಕಸೇವಾ ಆಯೋಗದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿಯು 7ನೇ ಬ್ಯಾಚ್‌ನ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಿದೆ. 2026ರಲ್ಲಿ ನಡೆಯಲಿರುವ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬರೆಯಲು ಇಚ್ಛಿಸುವ ಮಧ್ಯಮ ಹಾಗೂ ಬಡ ಕುಟುಂಬದ ವಿದ್ಯಾರ್ಥಿಗಳಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳುವಂತೆ ಆರ್ಯವೈಶ್ಯ ಮಹಾಸಭಾ ನಿರ್ದೇಶಕ ನಾಗೇಂದ್ರ ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬೆಂಗಳೂರಿನ ವಿಜಯನಗರ ಬಡಾವಣೆಯ ಚಂದ್ರಾ ಲೇಔಟ್ ನಲ್ಲಿರುವ ವಾಸವಿ ಅಕಾಡೆಮಿ ಈಗಾಗಲೇ ಹಲವು ತಂಡಗಳಿಗೆ ಉತ್ತಮ ತರಬೇತಿ ನೀಡಿದೆ. ಇದೀಗ 2026ರ ಯುಪಿಎಸ್ಸಿ ಪರೀಕ್ಷೆ ಬರೆಯುವ ಆಸಕ್ತ ವಿದ್ಯಾರ್ಥಿಗಳಿಗೆ 6 ತಿಂಗಳು ಉಚಿತ ತರಬೇತಿ ನೀಡಲಾಗುತ್ತಿದೆ. ಯಾವುದೇ ಸಮುದಾಯದ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅವಕಾಶವಿದೆ. ಸಂಸ್ಥೆ ನಡೆಸಲಿರುವ ಪ್ರವೇಶ ಮತ್ತು ಮೌಖಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ. ತರಬೇತಿಗೆ ಅರ್ಜಿ ಸಲ್ಲಿಸಲು 2025ರ ಜುಲೈ 15 ಕೊನೇ ದಿನ. ಪ್ರವೇಶ ಮತ್ತು ಮೌಖಿಕ ಪರೀಕ್ಷೆ ಜು. 20 ರಂದು ನಡೆಯಲಿದೆ. ವಿವರಗಳಿಗೆ 94480 74528 ಅಥವಾ 96639 00439 ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.