ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ಯಾವಾಗ? ಇಲ್ಲಿದೆ ನೋಡಿ ಮಾಹಿತಿ

upsc
Published on

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) 2020ನೇ ಸಾಲಿನ ಯಪಿಎಸ್​ಸಿ ನಾಗರಿಕ ಸೇವೆಗಳ ಪ್ರಿಲಿಮಿನರಿ ಮತ್ತು ಮೇನ್​ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಿದೆ.

ಅಕ್ಟೋಬರ್​ 4ರಂದು ಯುಪಿಎಸ್​ಸಿ ನಾಗರಿಕ ಸೇವಾ ಪ್ರಿಲಿಮಿನರಿ ಪರೀಕ್ಷೆಗಳು ನಡೆಯಲಿದ್ದರೆ, 2021ರ ಜನವರಿ 8ರಂದು ಮೇನ್​ ಪರೀಕ್ಷೆ ನಡೆಯಲಿದೆ.

ಇದಕ್ಕೂ ಮುನ್ನ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆಯನ್ನು 2020ರ ಮೇ 20ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ದೇಶಾದ್ಯಂತ ಕರೊನಾ ಪಿಡುಗು ಹಬ್ಬಲಾರಂಭಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್​ಡೌನ್​ ಘೋಷಿಸಿದ್ದರಿಂದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿತ್ತು. ಹೆಚ್ಚಿನ ಮಾಹಿತಿಗೆ upsc.gov.in ವೆಬ್​ಸೈಟ್​ಗೆ ಭೇಟಿ ನೀಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net