ಯುಪಿಎಸ್‌ಸಿಯಿಂದ ನೇಮಕಾತಿ; ಉನ್ನತ ಹುದ್ದೆಗಳ ಭರ್ತಿಗೆ ಅರ್ಜಿ

UPSC
Published on

ಬೆಂಗಳೂರು: ಕೇಂದ್ರ ಲೋಕ ಸೇವಾ ಆಯೋಗವನ್ನು (ಯುಪಿಎಸ್‌ಸಿ) 1926 ಅ.1ರಂದು ಸ್ಥಾಪಿಸಲಾಗಿದ್ದು, ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ ಮತ್ತು ಭಾರತೀಯ ಪೊಲೀಸ್ ಸೇವೆ ಸೇರಿದಂತೆ ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳ ನೇಮಕಾತಿಗಾಗಿ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತದೆ. ಪ್ರಸ್ತುತ ವಿವಿಧ ಉನ್ನತ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.  

ಒಟ್ಟು ಹುದ್ದೆಗಳು-1206

ಹುದ್ದೆಯ ವಿವರ
ನಾಗರಿಕ ಸೇವೆ ಹುದ್ದೆಗಳು 1056
ಅರಣ್ಯ ಸೇವೆ ಹುದ್ದೆಗಳು 150

ವಿದ್ಯಾರ್ಹತೆ, ವೇತನ
ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಯುಪಿಎಸ್‌ಸಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ಪಾವತಿಸಲಾಗುತ್ತದೆ.

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 2024 ಆ.1ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷ ತುಂಬಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 32ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಎಸ್‌ಸಿ-ಎಸ್‌ಟಿಗಳಿಗೆ 5 ವರ್ಷ, ಒಬಿಸಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ.

ಅರ್ಜಿ ಸಲ್ಲಿಸುವ ವಿಧಾನ
ಯುಪಿಎಸ್‌ಸಿ ಅಧಿಕೃತ upsc.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಪ್ರತ್ಯೇಕ ಅಧಿಸೂಚನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ದೂರವಾಣಿ ಸಂಖ್ಯೆಯನ್ನು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಬೇಕು. ವಯಸ್ಸು, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ದಾಖಲೆಗಳ ಜತೆಗೆ ಅರ್ಜಿ ಸಲ್ಲಿಸುವ 10 ದಿನಗಳ ಮುಂಚಿತವಾಗಿ ತೆಗೆಸಿಕೊಂಡಿರುವ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಸ್ಕಾೃನ್ ಮಾಡಿ ಅಪ್‌ಲೋಡ್ ಮಾಡಬೇಕು.

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು 100 ರೂ. ಅರ್ಜಿಶುಲ್ಕ ಪಾವತಿಸಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಿನಾಯಿತಿ ನಿಡಲಾಗಿದೆ.

ಆಯ್ಕೆ ಪ್ರಕ್ರಿಯೆ
ಪ್ರಿಲಿಮ್ಸ್ ಹಾಗೂ ಮೇನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಂತಿಮ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು ತಮ್ಮ ವಯೋಮಿತಿಯಲ್ಲಿ 6 ಪ್ರಯತ್ನಗಳಲ್ಲಿ ಪರೀಕ್ಷೆ ಎದುರಿಸಬಹುದಾಗಿದ್ದು, ಒಬಿಸಿ ಅಭ್ಯರ್ಥಿಗಳು 9 ಬಾರಿ ಯುಪಿಎಸ್‌ಸಿ ಪರೀಕ್ಷೆ ಬರೆಯಬಹುದು. ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಮಿತಿ ಇರುವುದಿಲ್ಲ. ಹಾಗಾಗಿ ಎಷ್ಟುಬಾರಿ ಬೇಕಾದರೂ ಯುಪಿಎಸ್‌ಸಿ ಪರೀಕ್ಷೆ ಎದುರಿಸಬಹುದು.

ಪ್ರಮುಖ ದಿನಗಳು
ಅರ್ಜಿ ಸಲ್ಲಿಸಲು ಕೊನೇ ದಿನ: 5-03-2024
ಒಟಿಆರ್ ತಿದ್ದುಪಡಿಗೆ ಕೊನೇ ದಿನ: 12-03-2024
ಅರ್ಜಿ ತಿದ್ದುಪಡಿಗೆ ಕೊನೇ ದಿನ: ಮಾ.6 ರಿಂದ 12
ಪರೀಕ್ಷೆ ಪ್ರಾರಂಭ: 26-05-2024

ಹೆಚ್ಚಿನ ಮಾಹಿತಿಗಾಗಿ: upsc.gov.in 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net