ಊರಗಡೂರು ಲೇಔಟ್‌ನಲ್ಲಿ 687 ನಿವೇಶನ

1 smg 8
Published on

ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಊರಗಡೂರಿನಲ್ಲಿ ನಿರ್ಮಿಸಲಿರುವ ಬಡಾವಣೆಯಲ್ಲಿ ವಿವಿಧ ಅಳತೆಯ 687 ನಿವೇಶನ ಸಿದ್ಧಪಡಿಸಿ ಇನ್ನೊಂದು ವರ್ಷದಲ್ಲಿ ಹಂಚಿಕೆ ಮಾಡುವ ಗುರಿ ಇದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.

ಊರಗಡೂರಿನ ಸೂಡಾ ಲೇಔಟ್ ನಿರ್ಮಾಣಕ್ಕೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹೊಸ ಲೇಔಟ್‌ನಲ್ಲಿ 4 ಕಡೆ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಜಾಗ ಮೀಸಲಿರಿಸಲಾಗುವುದು. ಜತೆಗೆ ವಿವಿಧ ಉದ್ದೇಶಗಳಿಗೆ 3 ಎಕರೆ ಭೂಮಿ ಹಾಗೂ ಸಿಎ ನಿವೇಶನಗಳನ್ನು ಕಾಯ್ದಿರಿಸಲಾಗುವುದು. ಲೇಔಟ್‌ನಲ್ಲಿ ಸುಂದರ ಉದ್ಯಾನವನ್ನೂ ನಿರ್ಮಿಸಲಾಗುವುದು ಎಂದರು.

ಸ್ಮಾರ್ಟ್‌ಸಿಟಿಯಾಗಿ ಅಭಿವೃದ್ಧಿಯಾಗುತ್ತಿರುವ ಶಿವಮೊಗ್ಗದಲ್ಲಿ ಈಗ ನಿವೇಶನಗಳ ಬೆಲೆ ಗಗನಕ್ಕೇರಿದೆ. ಆದರೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲು ಯೋಜಿಸಲಾಗಿದೆ. ಪ್ರಸ್ತುತ ನಿವೇಶನಕ್ಕಾಗಿ 6 ಸಾವಿರಕ್ಕೂ ಅಧಿಕ ಜನ ಅರ್ಜಿ ಸಲ್ಲಿಸಿದ್ದು ಹಿರಿತನದ ಮೇಲೆ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಮೇಯರ್ ಸುನೀತಾ ಅಣ್ಣಪ್ಪ, ಎಂಎಲ್‌ಸಿ ಎಸ್.ರುದ್ರೇಗೌಡ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಎಸ್.ಜ್ಞಾನೇಶ್ವರ್, ಮಂಡೇನಕೊಪ್ಪ ದೇವರಾಜ್, ಕೆ.ವಿ.ಅಣ್ಣಪ್ಪ, ಆಶ್ರಯ ಸಮಿತಿ ಅಧ್ಯಕ್ಷ ಶಶಿಧರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net