

ಅಹಮದಾಬಾದ್: ಭಾರತ ಮತ್ತು ಪಾಕ್ ನಡುವಿನ ಪಂದ್ಯ ವೀಕ್ಷಿಸಲು ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮನಿಸಿದ್ದರು. ಈ ವೇಳೆ ನಟಿ ದುಬಾರಿ ಬೆಲೆ ಬಾಳುವ ಮೊಬೈಲ್ ಕಳೆದುಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ಸುಂದರವಾದ ನೀಲಿ ಬಣ್ಣದ ಡ್ರೆಸ್ ಧರಿಸಿ ಭಾರತ ಕ್ರಿಕೆಟ್ ತಂಡವನ್ನು ಬೆಂಬಲಿಸಲು ಬಂದಿದ್ದ ಊರ್ವಶಿ ರೌಟೇಲಾ ಬಂದಿದ್ದರು. ಈ ವೇಳೆ ಚಿನ್ನದಿಂದ ಮಾಡಲಾದ ಐ ಫೋನ್ ಕಳೆದುಕೊಂಡಿದ್ದಾರೆ. ಈ ಕುರಿತಾಗಿ ನಟಿ ಟ್ವೀಟ್ ಮಾಡಿದ್ದಾರೆ.
ನನ್ನ 24 ಕ್ಯಾರೆಟ್ ಚಿನ್ನದ ಐ ಫೋನ್ ಕಳೆದು ಹೋಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಕಳೆದು ಹೋಗಿದೆ. ಯಾರಿಗಾದರೂ ಸಿಕ್ಕಿದ್ದರೆ, ದಯವಿಟ್ಟು ತಂದು ಕೊಡಿ, ಮೊಬೈಲ್ ನಿಮಗೆ ಸಿಕ್ಕಿದ್ದರೆ ನನ್ನ ಸಂಪರ್ಕಿಸಿ ಎಂದು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ. ಊರ್ವಶಿ ರೌಟೆಲ್ಲಾರ ಈ ಪೋಸ್ಟ್ ಅನ್ನು ಹಲವರು ಟ್ರೋಲ್ ಮಾಡಿದ್ದಾರೆ.
ಊರ್ವಶಿ ರೌಟೆಲ್ಲಾ ಸುಳ್ಳು ಹೇಳುತ್ತಿದ್ದಾರೆ. ಇದೊಂದು ಪ್ರಚಾರ ಪಡೆಯುವ ತಂತ್ರ ಎಂದು ಕೆಲವರು ಆರೋಪ ಮಾಡಿದ್ದಾರೆ. ಚಿನ್ನದ ಫೋನು ಸಿಕ್ಕವರು ಯಾರಾದರೂ ವಾಪಸ್ ಕೊಡುತ್ತಾರೆಯೇ ಎಂದು ನಟಿಗೆ ಪ್ರಶ್ನೆ ಮಾಡಿದ್ದಾರೆ.
ನಿನ್ನೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಾಟ ನೋಡಲು ಹಲವು ಜನಪ್ರಿಯ ಸೆಲೆಬ್ರಿಟಿಗಳು ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಗೃಹ ಮಂತ್ರಿ ಅಮಿತ್ ಶಾ ಅವರಿಂದ ಹಿಡಿದು ಹಲವು ಬಾಲಿವುಡ್ ತಾರೆಯರು, ಸ್ಯಾಂಡಲ್ವುಡ್ ತಾರೆ ರಮ್ಯಾ ಸೇರಿದಂತೆ ಇನ್ನೂ ಹಲವರು ಭಾರತ-ಪಾಕಿಸ್ತಾನ ಪಂದ್ಯವನ್ನು ಕಣ್ ತುಂಬಿಕೊಂಡರು.