

ನವದೆಹಲಿ; ಇರಾನ್ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಇನ್ನೂ ಈ ಬಗ್ಗೆ ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಇಂದು ನಡೆದ ಘಟನೆ ತೀವ್ರ ಕಳವಳಕಾರಿಯಾಗಿದ್ದು, ನಾವು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದೇವೆ. ಶಾಂತಿ, ಸ್ಥಿರತೆ ಮತ್ತು ಪರಸ್ಪರ ಸಹಕಾರಕ್ಕೆ ಆದ್ಯತೆ ನೀಡುವ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.
ಇರಾನ್ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬಳಿಕ ಪೆಜೆಶ್ಕಿಯಾನ್ ಅವರಿಂದ ಕರೆ ಬಂದಿತು. ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಅವರು ಪ್ರಧಾನಿ ಮೋದಿಗೆ ವಿವರವಾಗಿ ವಿವರಿಸಿದರು. ಈ ಕರೆ 45 ನಿಮಿಷಗಳ ಕಾಲ ನಡೆದಿದ್ದು, ಶಾಂತಿಯನ್ನು ಉತ್ತೇಜಿಸುವಲ್ಲಿ ಭಾರತವನ್ನು ಸ್ನೇಹಿತ ಮತ್ತು ಪಾಲುದಾರ ಎಂದು ಪೆಜೆಶ್ಕಿಯಾನ್ ಬಣ್ಣಿಸಿದರು. ಭಾರತದ ನಿಲುವಿಗೆ ಅವರು ಪ್ರಧಾನಿಗೆ ಧನ್ಯವಾದ ಅರ್ಪಿಸಿದರು ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂವಾದ ಮತ್ತು ರಾಜತಾಂತ್ರಿಕತೆಗೆ ಕರೆ ನೀಡಿದರು.
ಇನ್ನೂ ಇದಕ್ಕೂ ಮುನ್ನ ಟ್ರಂಪ್ ಅವರು, ಈ ದಾಳಿಗಳನ್ನು ಅದ್ಭುತ ಸೇನಾ ಕಾರ್ಯಚರಣೆಯ ಯಶಸ್ಸು ಎಂದು ಕರೆದರು. ಇದರೊಂದಿಗೆ ಇರಾನ್ ಪ್ರತೀಕಾರ ತೀರಿಸಿಕೊಂಡರೆ ಹೆಚ್ಚಿನ ದಾಳಿಗಳ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಈ ಕಾರ್ಯಾಚರಣೆಯು ತನ್ನ ಪ್ರಾಥಮಿಕ ಗುರಿಯನ್ನು ಸಾಧಿಸಿದೆ ಎಂದು ಹೇಳಿದರು.
(ಏಜೆನ್ಸೀಸ್)
2026 ರ ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಿಫಾರಸು ಮಾಡಿದ ಒಂದು ದಿನದ ನಂತರ ಈ ಇರಾನ್ ಮೇಲೆ ದಾಳಿ ನಡೆದಿದ್ದು ಪಾಕಿಸ್ತಾನ ಇದನ್ನು ಖಂಡಿಸಿದೆ.
ಇರಾನ್ ಮೇಲೆ ದಾಳಿ ನಡೆಸಿದ ಅಮೆರಿಕದ ಬಗ್ಗೆ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾಗಿದ್ದ ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಟ್ರಂಪ್ ಅವರ ಕಾತರ್ಯವೈಖರಿಯನ್ನು ಕೊಂಡಾಡಿದ್ದರು. ಅಲ್ಲದೇ ಕಳೆದ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ನಿರ್ಣಾಯಕ ರಾಜತಾಂತ್ರಿಕ ಹಸ್ತಕ್ಷೇಪ ಮಾಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಶಿಫಾರಸ್ಸು ಮಾಡಿದ್ದರು.