ಲೈಂಗಿಕ ಕ್ರಿಯೆ ಮೂಲಕ ಉದ್ದೇಶಪೂರ್ವಕವಾಗಿ ಎಚ್​ಐವಿ ಹರಡಲು ಯತ್ನಿಸಿದ ವ್ಯಕ್ತಿಗೆ 30 ವರ್ಷ ಜೈಲು ಶಿಕ್ಷೆ

arrest
Published on

ನವದೆಹಲಿ: ಲೈಂಗಿಕ ಕ್ರಿಯೆ ಮೂಲಕ ಉದ್ದೇಶಪೂರ್ವಕವಾಗಿ ಏಡ್ಡ್​ ರೋಗವನ್ನು ಹರಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯು ಅಮೆರಿಕದಲ್ಲಿ ನಡೆದಿದ್ದು, ಬಂಧಿತನನ್ನು ಅಲೆಕ್ಸಾಂಡರ್ ಲೂಯಿ (340 ಎಂದು ಗುರುತಿಸಲಾಗಿದೆ. ಈತನಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು, ಬಂಧಿತ ಆರೋಪಿಯು ಅಪ್ರಾಪ್ತರಿಮದ ಹಿಡಿದು 50 ವರ್ಷ ವಯಸ್ಸಿನ ಪುರುಷರೊಂದಿಗೆ ಲಯಂಗಿಕ ಸಂಬಂಧ ಹೊಂದಿದ್ದ ಎಂದು ತಿಳಿದು ಬಂದಿದೆ. ಈತನಿಗೆ ಕಾಯಿಲೆ ಇರುವ ವಿಚಾರ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಕಾಯಿಲೆ ಹರಡಲು ಈ ರೀತಿ ಮಾಡಿದ್ದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ಆರೋಪಿಯು ಆನ್​ಲೈನ್​ನಲ್ಲಿ ಅಪ್ರಾಪ್ತ ವಯಸ್ಕನೊಂದಿಗೆ ಆನ್​ಲೈನ್​ನಲ್ಲಿ ಲೈಂಗಿಕ ಸಂಭಾಷಣೆಯನ್ನು ಪ್ರಾರಂಭಿಸಿದ ಕಾರಣಕ್ಕಾಗಿ ಆತನ ಮೇಲೇ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆಯಲಾಗಿತ್ತು. ತನಿಖೆ ವೇಳೆ ಆತನೊಇಗೆ ಎಚ್​ಐವಿ ಇರುವುದು ದೃಢವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆತ ಔಷಧಿಗಳನ್ನು ಸರಿಯಾಗಿ ಸೇವಿಸುತ್ತಿರಲಿಲ್ಲ.

ಎಚ್‌ಐವಿ ಹರಡಲು ಪುರುಷರು ಮತ್ತು ಹದಿಹರೆಯದ ಹುಡುಗರೊಂದಿಗೆ ಉದ್ದೇಶಪೂರ್ವಕವಾಗಿ ಲೈಂಗಿಕ ಸಂಪರ್ಕವನ್ನು ಹೊಂದಿರುವುದಾಗಿ ವಿಚಾರಣೆ ವೇಳೆ ಹೇಳಿದ್ದಾನೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಾದ-ಪ್ರತಿವಾದ ಆಲಿಸಿದ ಬಳಿಕ ಈತನಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net