ಮಾಜಿ ರಾಷ್ಟ್ರಪತಿ ಪ್ರಣಬ್​ ನಿಧನಕ್ಕೆ ಸಂತಾಪ ಸೂಚಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್

donald-trump-pranab-mukherjee
Published on

ನವದೆಹಲಿ: ಮಾಜಿ ರಾಷ್ಟ್ರಪತಿ ಭಾರತರತ್ನ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು ಪ್ರಣಬ್ ಅವರ ನಿಧನದಿಂದ ಭಾರಿ ದುಃಖಿತನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಅವರ ಟ್ವೀಟ್​ನ ಸಾರ ಇದು- ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನ ವಾರ್ತೆ ತಿಳಿದು ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ದೊಡ್ಡ ನಾಯಕನೊಬ್ಬನ ನಿಧನದಿಂದ ಅನುಭವಿಸುತ್ತಿರುವ ದುಃಖಕ್ಕೆ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ.

ಇದಕ್ಕೂಯುಎಸ್​ ಸೆಕ್ರೆಟರಿ ಆಫ್ ಸ್ಟೇಟ್ ಮೈಕ್ ಪೋಂಪಿಯೋ ಕೂಡ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ದೂರದೃಷ್ಟಿಯುಳ್ಳ ನಾಯಕತ್ವ ಎರಡು ದೇಶಗಳ ಬಾಂಧವ್ಯಕ್ಕೆ ಸಹಕಾರಿಯಾಗಿದ್ದವು ಎಂದು ಅವರ ಕೊಡುಗೆಯನ್ನು ಸ್ಮರಿಸಿ ಸಂತಾಪ ವ್ಯಕ್ತಪಡಿಸಿದ್ದರು.

ಪ್ರಣಬ್ ಮುಖರ್ಜಿ(84) ಅವರು ಸೋಮವಾರ ಸಂಜೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ನಿನ್ನೆ ಅಪರಾಹ್ನ ಲೋಧಿ ರಸ್ತೆಯಲ್ಲಿರುವ ಕ್ರೆಮಟೋರಿಯಂನಲ್ಲಿ ಅಂತ್ಯಸಂಸ್ಕಾರ ನೆರವೇರಿತ್ತು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net