ಮನೆ ನಿರ್ಮಾಣಕ್ಕೆ ಸರ್ಕಾರದ ಸೌಲಭ್ಯ ಬಳಸಿಕೊಳ್ಳಿ

ಚಿತ್ರ 07ಎಸ್ ಡಿ ಪಿ 01
ಗ್ರಾಮಸ್ಥರ ಸಮ್ಮುಖದಲ್ಲಿ ವಸತಿ ನಿರ್ಮಾಣ ಕಾರ್ಯದೇಶ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿದ ಸಂದರ್ಭ
Published on

ಸಿದ್ದಾಪುರ: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯ್ಕೆಯಾದ ಬಸವ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ 26 ಫಲಾನುಭಾವಿಗಳಿಗೆ ಕಾರ್ಯದೇಶ ಪತ್ರವನ್ನು ಶಾಸಕ ಮಂತರ್‌ಗೌಡ ವಿತರಿಸಿದರು.

ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು, ಅಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕರು, ಸರ್ಕಾರದಿಂದ ನೀಡುತ್ತಿರುವ ಉಚಿತ ವಸತಿ ಯೋಜನೆಗೆ ಯಾವುದೇ ಹಣ ನೀಡುವ ಅಗತ್ಯವಿಲ್ಲ. ಮನೆ ನಿರ್ಮಾಣಕ್ಕೆ ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದರು. ಬಳಿಕ ಗ್ರಾಮ ಪಂಚಾಯಿತಿ ಅನುದಾನದಲ್ಲಿ 5 ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್ ಟಿವಿ ವಿತರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಚ್.ಎ.ಹಂಸ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ದಾಸ್, ಅಕ್ರಮ-ಸಕ್ರಮ ಸಮಿತಿ ಸದಸ್ಯ ಕೋಚನ ಹರಿಪ್ರಸಾದ್, ಶೇಖರ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮೀ, ಪಿಡಿಒ ಅಬ್ದುಲ್ಲಾ, ಕಂದಾಯ ನಿರೀಕ್ಷಕ ಚಂದ್ರ ಪ್ರಸಾದ್, ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಪಾಟೀಲ್ ವಿವಿಧ ಇಲಾಖೆಯ ಅಧಿಕಾರಿಗಳು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net