ಪಕ್ಷ ಸಂಘಟನೆಗೆ ತಂತ್ರಜ್ಞಾನ ಬಳಕೆ

hhr bjp
ಹೊಳೆಹೊನ್ನೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್ ಚಾಲನೆ ನೀಡಿದರು. ಕಿರಣ್ ಕುಮಾರ್, ಮಲ್ಲೇಶಪ್ಪ ಇತರರಿದ್ದರು.
Published on

ಹೊಳೆಹೊನ್ನೂರು: ಗ್ರಾಮೀಣ ಭಾಗದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಹೇಳಿದರು.

ಪಟ್ಟಣದಲ್ಲಿ ಭಾನುವಾರ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಪಕ್ಷ ಸಂಘಟನೆಗೆ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ಪ್ರತಿ ಮನೆಯಲ್ಲೂ ಪಕ್ಷದ ಸದಸ್ಯರಿರಬೇಕು. ಹಾಗಾಗಿ ಕಾರ್ಯಕರ್ತರ ಮೇಲೆ ಹೊಣೆಗಾರಿಕೆ ಹೆಚ್ಚಿದೆ. ಬಿಜೆಪಿ ದೇಶದ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಸದಸ್ಯತ್ವ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿ ಅತಿ ಹೆಚ್ಚು ಸದಸ್ಯರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನವಾಗಬೇಕು. ಸದಸ್ಯತ್ವ ಅಭಿಯಾನದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ. ಯುವ ಕಾರ್ಯಕರ್ತರು ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾಹಿತಿ ಪಡೆದು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದರು.
ಮಂಡಲ ಅಧ್ಯಕ್ಷ ಮಲ್ಲೇಶಪ್ಪ ಮಾತನಾಡಿ, ಬಿಜೆಪಿಯಿಂದ ಮಾತ್ರ ಸದೃಢ ಆಡಳಿತ ಸಾಧ್ಯ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ದಿಸೆಯಲ್ಲಿ ಮುಂದಿನ ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಯುವ ಮೋರ್ಚಾ ತಂಡ ನಿರಂತರವಾಗಿ ಸದಸ್ಯತ್ವ ಅಭಿಯಾನ ನಡೆಸುತ್ತಿದೆ. ಮಂಡಲ ವ್ಯಾಪ್ತಿಯಲ್ಲಿ 20 ಸಾವಿರ ಸದಸ್ಯತ್ವ ಗುರಿ ಹೊಂದಲಾಗಿದೆ. ಹೊಳೆಹೊನ್ನೂರು ಭಾಗದಲ್ಲಿ ಪಕ್ಷ ಸದೃಢವಾಗಿದ್ದು, ಸಂಘಟನೆ ಮುಂಚೂಣಿಯಲ್ಲಿದೆ ಎಂದು ಹೇಳಿದರು.
ಮಂಡಲ ಅಧ್ಯಕ್ಷ ಮಲ್ಲೇಶಪ್ಪ, ಕಿರಣ್‌ಕುಮಾರ್, ಚಿರಂತ್ ಪಾಟೀಲ್, ಪ್ರಶಾಂತ್, ಚಂದ್ರಕುಮಾರ್, ದರ್ಶನ್, ಸಾಗರ್, ಸಿದ್ದಪ್ಪ, ಕುಮಾರ್ ನಾಯ್ಡು, ನಾಗರಾಜಪ್ಪ, ಪ್ರಣಯ್, ಧನುಷ್, ವೆಂಕಟೇಶ್, ಎ.ಕೆ.ರಮೇಶ್, ಸತೀಶ್ ಗೌಡ, ರಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net