

ಅಲಹಾಬಾದ್: ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ.
ಜುಲೈ 2 ರಂದು ಖುದ್ದು ಹಾಜರಾಗುವಂತೆ ಸಂಸದ-ಶಾಸಕ ನ್ಯಾಯಾಲಯ ಬುಧವಾರ ಸೂಚಿಸಿದೆ.
ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ನೀಡಿದ ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಕಳೆದ ಫೆ.20 ರಂದು 'ಭಾರತ್ ಜೋಡೋ ಯಾತ್ರೆ' ಅಮೇಥಿ ತಲುಪಿದಾಗ ರಾಹುಲ್ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು.
ರಾಹುಲ್ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ, ಪ್ರಕರಣವು ಮತ್ತೆ ವಿಚಾರಣೆಗೆ ಬಂದಿರುವುದರಿಂದ ರಾಹುಲ್ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು. ಆದರೆ, ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ರಾಹುಲ್ ಅವರಿಗೆ ಸೂಚಿಸಿದೆ.