ಕಂದಕಕ್ಕೆ ಉರುಳಿ ಬಿದ್ದ ಬಸ್ ; 20ಕ್ಕೂ ಹೆಚ್ಚು ಮಂದಿ ಸಾವು...Bus Fell Into Ditch

accident news
Published on

ಉತ್ತರಾಖಂಡ: ( Bus Fell Into Ditch )ಕಂದಕಕ್ಕೆ ಬಸ್ಸ್ ಉರುಳಿಬಿದ್ದು, ಸ್ಥಳದಲ್ಲೇ 20 ಜನರು ಮೃತಪಟ್ಟಿದ್ದು, ಸೋಮವಾರ ಬೆಳಿಗ್ಗೆ ಉತ್ತರಾಖಂಡ ಆಲಮೋರ ಜಿಲ್ಲೆಯ ಗರ್ಗೆ ಹತ್ತಿರದ ರಾಮನಗರದಲ್ಲಿ ನಡೆದಿದೆ.

 ಬಸ್ ನಲ್ಲಿ 35ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಕಿನಾತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಬಸ್‌ ಕಾಲುವೆಗೆ ಬಿದ್ದಿದೆ. ರಕ್ಷಣಾ ತಂಡ ಸ್ಥಳಕ್ಕೆ ತಲುಪಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.ಮೃತಪಟ್ಟವರಲ್ಲಿ ಅಧಿಕವಾಗಿ ಮಕ್ಕಳಿದ್ದು, ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ತೀವ್ರವಾಗಿದ್ದರಿಂದ ಈ ರ್ದುಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ. ದಾರಿಹೋಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ಬಸ್‌ನಿಂದ ಹೊರ ತೆಗೆಯಲಾಗುತ್ತಿದೆ.

ಅಪಘಾತ ನಡೆದ ಸ್ಥಳವು ಗುಡ್ಡಗಾಡು ಪ್ರದೇಶವಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ಕಾಲುವೆಗೆ ಬಿದ್ದಿರುವುದು ವಿಡಿಯೋದಲ್ಲಿದೆ. ಹತ್ತಿರದಲ್ಲಿ ಒಂದು ಸಣ್ಣ ನದಿ ಹರಿಯುತ್ತದೆ. ಘಟನಾ ಸ್ಥಳದಲ್ಲಿ ಸ್ಥಳೀಯರು ನಿಂತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net