ಪ್ರಕೃತಿ ವಿಕೋಪಕ್ಕೆ ತತ್ತರಿಸಿದ ಉತ್ತರಾಖಂಡ: ಮಾದರಿ ನಿರ್ಧಾರ ತೆಗೆದುಕೊಂಡ ಸಿಎಂ

dhami
Published on

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಧಾರಾಕಾರವಾಗಿ ಸುರಿದ ಅವಿರತ ಮಳೆಯಿಂದಾಗಿ ಈವರೆಗೆ 75 ಜನರು ಸಾವಪ್ಪಿರುವುದು ವರದಿಯಾಗಿದೆ. ಇದರೊಂದಿಗೆ ಸುಮಾರು 7,000 ಕೋಟಿ ರೂಪಾಯಿಯಷ್ಟು ಆಸ್ತಿಹಾನಿ ಉಂಟಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ಅವರು ತಮ್ಮ ಅಕ್ಟೋಬರ್​ ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗೆಗಿನ ತಮ್ಮ ನಿರ್ಧಾರವನ್ನು ಟ್ವಿಟರ್​ ಮೂಲಕ ತಿಳಿಸಿರುವ ಧಾಮಿ, ಸಚಿವಾಲಯದ ಆಡಳಿತ ವಿಭಾಗಕ್ಕೆ ಸೂಕ್ತ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಪ್ರಾಕೃತಿಕ ವಿಕೋಪಗಳಾದಾಗ ದೇಶದ ಮತ್ತು ಜಗತ್ತಿನ ವಿವಿಧ ಮೂಲೆಗಳಿಂದ ನೆರವು ಹರಿದುಬರುವುದು ಸಾಮಾನ್ಯ. ಈ ನಿಟ್ಟಿನಲ್ಲಿ ಅನುಕೂಲಕರ ಸ್ಥಿತಿಯಲ್ಲಿರುವ ಎಲ್ಲರೂ ತಮ್ಮ ಕೈಲಾದ ಸಹಾಯ ಮಾಡಬೇಕು ಎಂಬ ಸಂಕೇತವಾಗಿ ಸಿಎಂ ಧಾಮಿ ತೆಗೆದುಕೊಂಡಿರುವ ಈ ನಿರ್ಧಾರ ಪ್ರಶಂಸಾರ್ಹ ಎಂದು ನೆಟ್ಟಿಗರು ಪ್ರಶಂಸಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net