ನಿರ್ಮಾಣ ಹಂತದ ಸುರಂಗ ಕುಸಿತ; 40 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

Untitled design (20)
Published on

ಉತ್ತರಾಖಂಡ: ನಿರ್ಮಾಣ ಹಂತದಲ್ಲಿದ್ದ ಸುರಂಗವು ಭಾನುವಾರ (ನ.12) ಮುಂಜಾನೆ ಕುಸಿದು ಕನಿಷ್ಠ 40 ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ ವರದಿಯಾಗಿದೆ. ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆಯುವ ರಕ್ಷಣಾ ಕಾರ್ಯ ನಡೆಯುತ್ತಿದೆ.

ತಡರಾತ್ರಿ ಈ ಘಟನೆ ಸಂಭವಿಸಿದ್ದು, ಸಿಲುಕಿದ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ತಂಡವು ಉತ್ತರಾಖಂಡ ಸರ್ಕಾರ ಮತ್ತು ಆಡಳಿತದೊಂದಿಗೆ ಅಪಘಾತದ ಸ್ಥಳಕ್ಕೆ ತಲುಪಿದೆ. ಸದ್ಯ ಸುರಂಗದಿಂದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆಯಲು ರಕ್ಷಣಾ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಅದೃಷ್ಟವಶಾತ್, ಇಲ್ಲಿಯವರೆಗೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ. ವರದಿಗಳ ಪ್ರಕಾರ, ಸ್ಥಳದಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ನಿಯೋಜಿಸಲಾಗಿದೆ.

ಘಟನೆಯ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದೆ. "ಘಟನಾ ಸ್ಥಳಕ್ಕೆ ಪೊಲೀಸ್ ಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ತಲುಪಿವೆ. ದಾಖಲೆಯ ಪ್ರಕಾರ ಸುಮಾರು 40 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ನಾವು ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸುತ್ತೇವೆ. ಇದುವರೆಗೆ ಯಾವುದೇ ಸಾವು-ನೋವು ವರದಿಯಾಗಿಲ್ಲ" ಎಂದು ಉತ್ತರಕಾಶಿ ಎಸ್ಪಿ ಅರ್ಪಣ್ ಯದುವಂಶಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net