

ಬೆಂಗಳೂರು: ವಿನಾಯಕ ಗೋಕಾಕ್ ವ್ಮಾಯ ಟ್ರಸ್ಟ್ ನೀಡುವ ಪ್ರಸಕ್ತ ಸಾಲಿನ ವಿ.ಕೃ. ಗೋಕಾಕ್ ಪ್ರಶಸ್ತಿಗೆ ಸಾಂಸ್ಕೃತಿಕ ರಾಯಭಾರಿ ಖ್ಯಾತಿಯ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಭಾಜನರಾಗಿದ್ದಾರೆ.
ಪ್ರಶಸ್ತಿಯು 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಸೆ.24ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿನ ಭಾರತೀಯ ವಿದ್ಯಾಭವನದ ಕೆ.ಆರ್.ಜಿ. ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಭವನದ ನಿರ್ದೇಶಕ ಎಚ್.ಎನ್. ಸುರೇಶ್ ಮತ್ತು ಅನಿಲ್ ಗೋಕಾಕ್, ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.