ವಾಲ್ಮೀಕಿ ಸಮಾಜಕ್ಕೆ ಮಂತ್ರಿಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದ್ದು ಹೀಗೆ...

BSY
Published on

ಹಾಸನ: ಮುಂದಿನ ವಾರದಿಂದ ಬಜೆಟ್​ ಸಿದ್ಧತೆ ಮಾಡಿಕೊಳ್ಳುತ್ತೇನೆ. ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್​ ತಯಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಪುಷ್ಪಗಿರಿ ಉತ್ಸವಕ್ಕೆ ಚಾಲನೆ ನೀಡಲು ಆಗಮಿಸಿದ ಅವರು ಹಳೇಬೀಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರವಾಸೋದ್ಯಮಕ್ಕೂ ಬಜೆಟ್​ನಲ್ಲಿ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ ಎಂದರು.

ವಾಲ್ಮೀಕಿ ಸಮಾಜಕ್ಕೆ ಮಂತ್ರಿಗಿರಿ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದ ಸ್ವಾಮೀಜಿಗಳ ಜತೆ ಚರ್ಚಿಸಿ ತೀರ್ಮಾನಕ್ಕೆ ಬರುತ್ತೇನೆ. ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುತ್ತೇನೆ. ಪ್ರಧಾನಿ ರಾಜ್ಯಕ್ಕೆ ಬಂದಾಗ ಇಲ್ಲಿನ ಸಮಸ್ಯೆಯನ್ನು ಅವರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net