

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ. ನಾಗೇಂದ್ರಗೆ (B Nagendra) ಇದೀಗ ಜಾಮೀನು ಮಂಜೂರು ಮಾಡಿರುವ ಕೋರ್ಟ್, ಷರತ್ತುಬದ್ಧ ಜಾಮೀನು ನೀಡಿದೆ.
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂಬ ಆರೋಪದಡಿ ಜೈಲುಪಾಲಾಗಿದ್ದ ಬಿ. ನಾಗೇಂದ್ರ, ತಮ್ಮ ಮೇಲೆ ದೊಡ್ಡ ಆರೋಪ ಕೇಳಿಬಂದ ಬೆನ್ನಲ್ಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ, ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಕಳೆದ ಎರಡು ತಿಂಗಳಿನಿಂದ ಈ ಪ್ರಕರಣದಲ್ಲಿ ಸಿಲುಕಿದ್ದ ನಾಗೇಂದ್ರಗೆ ಇಂದು ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.