ಕಡೆಮನುಗನಹಳ್ಳಿ ಶಾಲೆ ವಿದ್ಯಾರ್ಥಿಗಳಿಂದ ವನದರ್ಶನ

IMG-20240102-WA0195
ಅರಣ್ಯ ಇಲಾಖೆಯ ಚಿಣ್ಣರ ವನದರ್ಶನ ಕಾರ್ಯಕ್ರಮದಲ್ಲಿ ಹನಗೋಡು ಹೋಬಳಿಯ ಕಡೆಮನುಗನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
Published on

ಹನಗೋಡು: ಕಡೆಮನುಗನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿ ಅರಣ್ಯ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ಪಡೆದುಕೊಂಡರು.


ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಚಿಣ್ಣರ ವನ ದರ್ಶನ ಕಾರ್ಯಕ್ರಮದಲ್ಲಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು ಮಂಗಳವಾರ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದರು.


ಹುಣಸೂರು ವಲಯದ ಉಪವಲಯ ಅರಣ್ಯಧಿಕಾರಿ ವೀರಭದ್ರಯ್ಯ ಮಾತನಾಡಿ, ಕಾಡಂಚಿನಲ್ಲಿರುವ ಜನರಿಂದ ಅರಣ್ಯದ ಮೇಲಿನ ಒತ್ತಡ ಕಡಿಮೆ ಮಾಡಲು ಅರಣ್ಯ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಹಾಗೂ ಪ್ರಾಣಿಗಳ ಸಂರಕ್ಷಣೆ ಬಗ್ಗೆ ಮಾಹಿತಿ ನೀಡುವ ಮೂಲಕ ಅರಣ್ಯ ಹಾಗೂ ಪರಿಸರ ಸಂರಕ್ಷಣೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.


ನಾಗರಹೊಳೆ ಉಪವಲಯ ಅರಣ್ಯಾಧಿಕಾರಿ ನವೀನ್ ರಾವತ್ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ, ಅವುಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಶಿಕ್ಷಕಿ ಜಯಂತಿ, ಶಿಕ್ಷಕರಾದ ಬಿ.ಎಂ.ರಾಘವೇಂದ್ರ, ಡಿ.ಬಿ.ಸುಂದರೇಶ್, ಬಿ.ಎ.ಸೌಮ್ಯಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net