ದೇಶದ 150 ಸ್ಥಳದಲ್ಲಿ 7ರಂದು ವಂದೇ ಮಾತರಂ ಗೀತೆ ಗಾಯನ

untitled-design-2-690b8cb9e775d
Published on

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ದೇಶದಾದ್ಯಂತ 150 ಸ್ಥಳಗಳಲ್ಲಿ ಸಾಮೂಹಿಕವಾಗಿ ವಂದೇ ಮಾತರಂ ಗೀತೆ ಹಾಡುವ ಕಾರ್ಯಕ್ರಮವನ್ನು ಬಿಜೆಪಿ ಆಯೋಜಿಸಿದ್ದು, ನವೆಂಬರ್ 7ರಂದು ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ನವೆಂಬರ್ 7ರಿಂದ 26 ರವರೆಗೆ ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ನವೆಂಬರ್ 7ರಂದು 150 ಸ್ಥಳಗಳಲ್ಲಿ ವಂದೇ ಮಾತರಂ ಹಾಡಲಾಗುವುದು. ಆ ನಂತರ ಸ್ವದೇಶಿ ಉತ್ಪನ್ನಗಳನ್ನು ಬಳಸುವ ಪ್ರತಿಜ್ಞೆ ಮಾಡಲಾಗುವುದು. ಕಾರ್ಗಿಲ್ ಯುದ್ಧ ಸ್ಮಾರಕ, ಅಂಡಮಾನ್ ಮತ್ತು ನಿಕೋಬಾರ್ ಸೆಲ್ಯುಲಾರ್ ಜೈಲು, ಒಡಿಶಾದ ಸವರಾಜ್ ಆಶ್ರಮ, ಆಗ್ರಾದ ಶಹೀದ್ ಸ್ಮಾರಕ ಉದ್ಯಾನವನ ಮತ್ತು ವಾರಾಣಸಿಯ ನಮೋ ಘಾಟ್, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಹುತಾತ್ಮರಾದ ಸ್ಥಳ ಸೇರಿದಂತೆ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ಥಳಗಳಲ್ಲಿ ಗೀತ ಗಾಯನ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net