ಕರ್ನಾಟಕ ವನ್ಯಜೀವಿ ಮಂಡಳಿ ಪುನರ್ ರಚನೆ; ಪಟ್ಟಣ್, ಗಣೇಶ್, ಪುಟ್ಟಣ್ಣ ಸೇರಿ 16 ಸದಸ್ಯರ ನೇಮಕ

CM Siddaramaiah
Published on

ಬೆಂಗಳೂರು:
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಮದುರ್ಗ ಶಾಸಕ ಅಶೋಕ್ ಎಂ ಪಟ್ಟಣ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಸರ್ಕಾರೇತರ ಸಂಸ್ಥೆಗಳಿಂದ ಸೌತ್ ಇಂಡಿಯಾ ವನ್ಯಜೀವಿ ಸಂಘದಿಂದ ಸುಶೀಲಗೈನಚಂದ್, ಟೈಗರ್ಸ್‌ ಅನ್‌ಲಿಮಿಟೆಡ್ ವನ್ಯಜೀವಿ ಸಮಾಜದಿಂದ ಸೀಮಾ ಬೇಗಂ ಖಲೀಲ್, ಬೆಂಗಳೂರು ಪರಿಸರ ಟ್ರಸ್ಟ್‌ನಿಂದ ಡಾ.ಆರ್.ವಿ.ದಿನೇಶ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಪರಿಸರ ತಜ್ಞರು, ಬಯೋಲಜಿಸ್ಟ್, ಪರಿಸರವಾದಿಗಳ ವಿಭಾಗದಿಂದ ಬೆಂಗಳೂರಿನ ರವೀಂದ್ರ ರಘುನಾಥ, ಡಾ.ರಾಜಕುಮಾರ್ ಎಸ್ ಅಲ್ಲೆ, ಅಜಿತ್ ಕರಿಗುಡ್ಡಯ್ಯ, ಧ್ರುವ ಎಂ ಪಾಟೀಲ್, ಮಲ್ಲಪ್ಪ ಎಸ್ ಅಂಗಡಿ, ವಿರಾಜಪೇಟೆಯಿಂದ ಸಂಕೇತ ಪೂವಯ್ಯ, ಧಾರವಾಡದ ವೈಶಾಲಿ ಕುಲಕರ್ಣಿ, ಬೀದರ್‌ನ ವಿನಯ್ ಕುಮಾರ್ ಮಲ್ಲಿಗೆ, ಮೈಸೂರಿನ ಡಾ.ಸಂತೃಪ್ತ ಅವರನ್ನು ನೇಮಕಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net