ಗ್ರಾಮ ಆಡಳಿತಾಧಿಕಾರಿ ನೇಮಕ; ಜನವರಿ 27,2025ಕ್ಕೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಸೂಚನೆ|VAO; Notice to publish final selection list on January 27, 2025

Vidhanasoudha
Published on

ಬೆಂಗಳೂರು: ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿಗಳ ನೇಮಕ ಪ್ರಕ್ರಿಯೆಯನ್ನು ಜ.27, 2025ಕ್ಕೆ ಪೂರ್ಣಗೊಳಿಸುವಂತೆ (VAO; Notice to publish final selection list on January 27, 2025)ಸರ್ಕಾರ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.

1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ನೇಮಕ ಮಾಡಲು ಅಧಿಸೂಚನೆ ಹೊರಡಿಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು, 45,933 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ಅರ್ಹರಾಗಿರುವ ಈ ಅಭ್ಯರ್ಥಿಗಳಿ ಪೈಕಿ ಜಿಲ್ಲಾಧಿಕಾರಿಗಳು ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ದಾಖಲಾತಿ ಪರಿಶೀಲನೆಗೆ ಆಹ್ವಾನಿಸಿ ದಾಖಲಾತಿ ಪರೀಕ್ಷಿಸಿ 1:1 ಅನುಪಾತದಂತೆ ನೇಮಕ ಮಾಡಲು ಆದೇಶಿಸಲಾಗಿದೆ.

ಡಿ.20 ರಿಂದ 24 ರವೆಗೆ ಅಧಿಸೂಚನೆ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ದಾಖಲೆ ಪರಿಶೀಲನೆಗೆ ಪ್ರಕಟಿಸಬೇಕು.

ಜನವರಿ 2,2025 ರಿಂದ ಜನವರಿ 10,2025ರ ವರೆಗೆ 1:3 ಅನುಪಾತದಲ್ಲಿನ ಅಭ್ಯರ್ಥಿಗಳ ದಾಖಲೆ ಪರಿಶೀಲಿಸಬೇಕು ಮತ್ತು ವಿಕಲಚೇತನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು.

ಜನವರಿ 15,2025 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ(1:1) ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಬೇಕು. ಜನವರಿ 16,2025 ರಿಂದ ಜನವರಿ 23,2025 ರ ವರೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು ಹಾಗೂ ಜನವರಿ 27,2025 ರಂದು ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಬೇಕು ಎಂದು ಕಂದಾಯ ಇಲಾಖೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net