ವಿಧಾನ ಪರಿಷತ್ತಿಗೆ ವರದಿ ಮಂಡನೆ

Published on

ಬೆಂಗಳೂರು:

ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಮತ್ತು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸಮಿತಿ ವರದಿಯನ್ನು ಸದನದಲ್ಲಿ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸದಸ್ಯ ರಾಜೇಂದ್ರ ರಾಜಣ್ಣ ಮಂಡಿಸಿದರು.

2023-24ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 3ನೇ ವರದಿಯನ್ನು ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಸದಸ್ಯರಾದ ಕೆ. ಅಬ್ದುಲ್ ಜಬ್ಬಾರ್ ಮಂಡಿಸಿದರು.

ಕಾಗದ ಪತ್ರಗಳ ಮಂಡನೆ

ಮಾರ್ಚ್ 2022ಕ್ಕೆ ಕೊನೆಗೊಂಡ ವರ್ಷಕ್ಕೆ ಕೇಂದ್ರದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರ ಇಲಾಖೆಗಳು ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಮೇಲಿನ ಅನುಸರಣಾ ಲೆಕ್ಕಪರಿಶೋಧನಾ ವರದಿ(2024ರ ವರದಿ ಸಂಖ್ಯೆ 3) ರ ಕಾಗದ ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯ ಮುಂದೆ ಮಂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net