ಕಾಂತಾರ ಸಿನಿಮಾ ರಿಲೀಸ್‌ ಆಗಿ ಇಂದು (ಸೆ.30) 1 ವರ್ಷ..! ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಭಿಮಾನಿಗಳಿಗೆ ಮತ್ತೊಂದು ಗುಡ್‌ ನ್ಯೂಸ್‌

vvv
Published on

Kantara Completed one year: ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಕಾಂತಾರ ಸಿನಿಮಾದಲ್ಲಿ ನಟಿಸಿದ್ದಾರೆ. ಬಿಡುಗಡೆಗೂ ಮುನ್ನವೇ ಪ್ರಿಮಿಯರ್ ಶೋ ಮೂಲಕ ಕಾಂತಾರ ಜನಮನ್ನಣೆ ಗಳಿಸಿತ್ತು.


ಈ ಸಿನಿಮಾ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರದ ‘ವರಾಹ ರೂಪಂ..’ ವಿಡಿಯೋ ಸಾಂಗ್ ರಿಲೀಸ್ ಮಾಡಲು ಹೊಂಬಾಳೆ ಫಿಲ್ಮ್ಸ್ ಪ್ಲ್ಯಾನ್ ಮಾಡಿಕೊಂಡಿದೆ.


‘ಕಾಂತಾರ’ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಾಡಂತೂ ಜನಮನ್ನಣೆ ಗಳಿಸಿದ್ದು, ಅಭಿಮಾನಿಗಳು ವಿಡಿಯೋ ಸಾಂಗ್​​ ನೋಡಲು ಕಾದು ಕುಳಿತಿದ್ದಾರೆ. ಇದೀಗ ಇಂದಿಗೆ ಕಾಂತಾರ್​ ಸಿನಿಮಾ ರಿಲೀಸ್​​ ಆಗಿ ಒಂದು ವರ್ಷ ಪೂರ್ಣಗೊಂಡಿದೆ.


ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಒಂದು ಸಿಕ್ಕಿದೆ. ಹೌದು ಇಂದು (ಸೆ.30) ಕಾಂತಾರ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಈ ಹಿನ್ನಲೆ ಚಿತ್ರದಲ್ಲಿ ಭರ್ಜರಿ ಯಶಸ್ಸು ಕಂಡ ‘ವರಾಹ ರೂಪಂ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಆಗಲಿದೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್ ಇನ್ಸ್​​​ಟಾಗ್ರಾಂನಲ್ಲಿ ಹಂಚಿಕೊಂಡಿದೆ.


ಕಾಂತಾರ ಸಿನೆಮಾ ಬರೋಬ್ಬರಿ 400 ಕೋಟಿಗಿಂತಲೂ ಅಧಿಕ ಗಳಿಕೆ ಮಾಡಿದ್ದು, ಇದೀಗ ವಿಡಿಯೋ ಸಾಂಗ್​​ ಒಂದು ವರ್ಷದ ಬಳಿಕ ರಿಲೀಸ್​​ ಆಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net